ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಸ್ಪದ ಸಾವು…
ಖಾಸಗಿ ಶಾಲೆಯಲ್ಲಿ 4 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿರುವ ಆರ್ ಡಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ 9 ವರ್ಷದ ನಿಶಿತಾ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಿಶಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರಾದ ನಾಗೇಂದ್ರ-ಸರಸ್ವತಿ ದಂಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮ ಮಗುವಿನ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ಮಾಡಿದ್ದಾರೆ. ಆಗ ಮಗು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ನಿಶಿತಾ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ 1. 50 ರ ಸುಮಾರಿಗೆ ಕುಸಿದು ಬಿದ್ದಿದ್ದಾಳೆ. ತಕ್ಷಣ ಶಾಲಾ ಸಿಬ್ಬಂದಿ ಪೋಷಕರಿಗೆ ಮಾಹಿತಿ ತಿಳಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿ ಸಾವನನ್ನಪ್ಪಿದ್ದಾಳೆ.
ಆದ್ರೆ ನಿಶಿತಾ ಅಜ್ಜಿ ಶಾಲೆಯ ಮೇಲೆ ಗಂಭೀರ ಆರೋಪ ಮಾಡಿದ್ದು ಶಿಕ್ಷಕರು ಮೊಮ್ಮಗಳನ್ನ ಹೊಡೆದಿದ್ದಾರೆ ಮಧ್ಯಾಹ್ನ ಮಗಳು ಚೆನ್ನಾಗಿಯೇ ಇದ್ದಳು ಎಂದು ಅಜ್ಜಿ ನರಸಮ್ಮ ಆರೋಪ ಮಾಡಿದ್ದಾರೆ.
Bengaluru: School girl died in the private school. Parents blame teachers








