Bengaluru Tech Summit 2022 : ಪ್ರಧಾನಿ ಮೋದಿ ಚಾಲನೆ , ವಿಶೇಷತೆ , ಡೀಟೇಲ್ಸ್..!
Bengaluru Tech Summit 2022
ಸಮ್ಮಿಟ್ ಗೆ ಪ್ರಧಾನಿ ಮೋದಿ ಚಾಲನೆ
9 ಒಡಂಬಡಿಕೆಗೆ ಸಾಕ್ಷಿಯಾಗಲಿದೆ ಸಮಾವೇಶ
ಬೆಂಗಳೂರು ಟೆಕ್ ಸಮೆಟ್ : 575 ಹೆಚ್ಚು ಪ್ರದರ್ಶಕರು ಭಾಗಿ
16 ವಿವಿಧ ರಾಜ್ಯಗಳ ಸ್ಟಾರ್ಟ್ ಅಪ್ ಗಳು ಭಾಗಿ
ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಬೃಹತ್ ಬೆಂಗಳೂರು ಟೆಕ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಅವರು ನವೆಂಬರ್ 16ಕ್ಕೆ ಬೆಳಿಗ್ಗೆ 10 ಗಂಟೆಗೆ ವರ್ಚುಯಲ್ ಆಗಿ ಚಾಲನೆ ನೀಡಿದರು..
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಸಮಾವೇಶ ನಿನ್ನೆಯಿಂದ ಆರಂಭಗೊಂಡಿದ್ದು, 3 ದಿನಗಳ ಕಾಲ ನಡೆಯಲಿದೆ.
ಈ ಅವಧಿಯಲ್ಲಿ 9 ಒಡಂಬಡಿಕೆ 20 ಉತ್ಪನ್ನಗಳ ಬಿಡುಗಡೆಯಾಗಲಿದೆ…
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಮುರುಗೇಶ್ ಆರ್ ನಿರಾಣಿ, ಬಯೋಟೆಕ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು..
ಅಲ್ಅಲದೇ ರಬ್ ಸಂಸ್ಥಾನದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಖಾತೆಯ ಸಹಾಯಕ ಸಚಿವ ಒಮರ್ ಬಿನ್ ಸುಲ್ತಾನ್ ಅಲ್ ಒಲಾಮಾ, ಆಸ್ಟ್ರೇಲಿಯಾದ ವಿದೇಶಾಂಗ ಖಾತೆ ಸಹಾಯಕ ಸಚಿವ ಟಿಮ್ ವ್ಯಾಟ್ಸ್, ಫಿನ್ಲೆಂಡ್ ನ ವಿಜ್ಞಾನ ಸಚಿವ ಪೆಟ್ರಿ ಹಾನ್ಕೊನೆನ್, ಭಾರತದ ಪ್ರಪ್ರಥಮ ಯೂನಿಕಾರ್ನ್ ಕಂಪನಿ ಇಮ್ಮೊಬಿ ಯ ಸಂಸ್ಥಾಪಕ ನವೀನ್ ತೆವಾರಿ, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಅಮೆರಿಕದ ಕಿಂಡ್ರಿಲ್ ಕಂಪನಿಯ ಸಿಇಒ ಮಾರ್ಟಿನ್ ವರ್ಚುಯಲ್ ಆಗಿ ಭಾಗಿಯಾಗಿದ್ದರು..
ಸಮಾವೇಶದಲ್ಲಿ 575 ಹೆಚ್ಚು ಪ್ರದರ್ಶಕರು ಭಾಗವಹಿಸುತ್ತಿದ್ದು , ದೇಶದ 16 ವಿವಿಧ ರಾಜ್ಯಗಳ ಸ್ಟಾರ್ಟ್ ಅಪ್ ಗಳು ಪಾಲ್ಗೊಂಡಿದ್ದು , 5,000 ಕ್ಕಿಂತ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳುತ್ತಿರುವುದು ವಿಶೇಷ..
ಬೆಂಗಳೂರು ಟೆಕ್ ಸಮಿಟ್ ಗೆ ನಿತ್ಯ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರುತ್ತದೆ..








