ಬೆಂಗಳೂರು : ನಗರದ ಕೆಂಗೇರಿ ಉಪನಗರ ನಾಡಕಚೇರಿಗೆ (Nadakacheri) ಬೆಂಕಿ ಹೊತ್ತಿದ್ದು, ಹಲವಾರು ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಕೆಂಗೇರಿ ಉಪನಗದರ ನಾಡಕಚೇರಿ ಆವರಣದ ಪ್ರವೇಶ ದ್ವಾರದ ಬಳಿಯೇ ಬೆಂಕಿ ಕಾಣಿಸಿಕೊಂಡು ನಂತರ ಇಡೀ ಕಚೇರಿಗೆ ಆವರಿಸಿದೆ. ಬೆಂಕಿ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿವೆ.
ಘಟನೆ ನಂತರ ಸಂಬಂಧಿಸಿದಂತೆ ನಾಡಕಚೇರಿ ಸಿಬ್ಬಂದಿ ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ತನಿಖೆ ಕೈಗೊಂಡಿದ್ದಾರೆ.
ಕಂಪ್ಯೂಟರ್ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಮುಖ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.