Bengaluru – BMTC ಬಸ್ ಹರಿದು ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು
ಬೆಂಗಳೂರು : ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಅಕ್ಟೋಬರ್ 10 ರಂದು ಬಸ್ ಹತ್ತುವಾಗ ವಿದ್ಯಾರ್ಥಿನಿ ಶಿಲ್ಪಾ ಕೆಳಗೆ ಬಿದ್ದಿದ್ದಳು.

ಆ ವೇಳೆ ಆಕೆಯ ಮೇಲೆ ಬಸ್ ಹತ್ತಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕೋಲಾರದ ಬಂಗಾಯಪೇಟೆಗೆ ರವಾನೆ ಮಾಡಲಾಗಿದೆ.
ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದರು.








