ಬೆಂಗಳೂರು : ಡಿ.ಜೆ.ಹಳ್ಳಿ ಹಾಗೂ ಕೆ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಕಾನೂರು ಕೈಗೆತ್ತಿಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ ರವಿ, “ಡಿ.ಜೆ ಹಳ್ಳಿ ಗಲಭೆ ಪ್ರಕರಣ, ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲವರಿಗೆ ತಾವು ಕಾನೂನನ್ನು ಮೀರಿದವರು ಎಂಬ ಭಾವನೆಯಿದೆ. ಇದು ಏಳು ದಶಕಗಳ ಓಲೈಕೆ ರಾಜಕಾರಣದ ಪರಿಣಾಮ ಎಂದು ಆಕ್ರೋಶ ಹೊರಹಾಕಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣವನ್ನು ಖಂಡಿಸುತ್ತೇನೆ. ಪತ್ರಕರ್ತರು, ಪೊಲೀಸರು, ಅಮಾಯಕ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಪೂರ್ವಯೋಜಿತ ಎಂಬಂತೆ ಕಾಣಿಸುತ್ತದೆ. ಕಲ್ಲು, ದೊಣ್ಣೆ, ಪೆಟ್ರೋಲ್ ಬಾಂಬ್ ಗಲಭೆಕೋರರಿಗೆ ಬಂದಿದ್ದೆಲ್ಲಿಂದ..? ಗಲಭೆ ಪೂರ್ವಯೋಜಿತ, ಗಲಭೆ ನಡೆಸುವವರಿಗೆ ಒಂದು ನೆಪ ಬೇಕಿತ್ತು. ಇವರುಗಳನ್ನು ಬೇರು ಸಹಿತ ಮಟ್ಟ ಹಾಕಲೇಬೇಕು ಎಂದು ಬರೆದುಕೊಂಡಿದ್ದಾರೆ.








