ಬೆಂಗಳೂರು : ಕೆಜಿ ಹಳ್ಳಿಯ ಗಲಾಟೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ” ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.
ಪ್ರತಾಪ್ ಸಿಂಹ ಟ್ವೀಟ್ ನಲ್ಲಿ, “ಎಸ್ಡಿಪಿಐ ಮತ್ತು ಕೆಯಫ್ಡಿಯ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ? ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್?” ಎಂದು ಕುಟುಕಿದ್ದಾರೆ.
ಎಸ್ಡಿಪಿಐ ಮತ್ತು ಕೆಯಫ್ಡಿಯ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ? ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್? https://t.co/rU8wSFQR51
— Prathap Simha (@mepratap) August 12, 2020








