ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಬ್ದುಲ್ ಅಜೀಂ ಅವರು ಪ್ರತಿಕ್ರಿಯೆ ನೀಡಿದ್ದರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಭೇಟಿ ಬಳಿಕ ಮಾತನಾಡಿರುವ ಅವರು ಕೋಮುಗಲಭೆಯನ್ನ ಸಮರ್ಥವಾಗಿ ನಿಯಂತ್ರಣಕ್ಕೆ ತಂದಿರುವ ಬೆಂಗಳೂರು ಪೊಲೀಸರನ್ನು ಅಭಿನಂದಿಸುತ್ತೇನೆ. ಬುಡವನ್ನ ಪತ್ತೆಹಚ್ಚಿದ್ರೇ ಮಾತ್ರ ಇಂತಹ ಘಟನೆಗಳನ್ನು ಮಟ್ಟಹಾಕೋಕೆ ಸಾಧ್ಯ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅಮಾಯಕರನ್ನ ಬಂಧಿಸಬಾರದು ಎಂದು ಮನವಿ ಮಾಡಿದ್ದೇನೆ. ಅಪರಾಧಿಗಳ ಆಸ್ತಿ ಮುಟ್ಡುಗೋಲು ಹಾಕಿಕೊಳ್ಳೋಕೆ ಅವಕಾಶ ಇದೆ. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದಿದ್ದಾರೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








