ಡಿಜೆ ಹಳ್ಳಿಯಲ್ಲಿ ರಾತ್ರೋರಾತ್ರಿ ನಡೆದಿದ್ದ ಹಿಂಸಾಚಾರ ಇಡೀ ರಾಜ್ಯಕ್ಕೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸದ್ಯ ಈ ಪ್ರಕರಣ ಸಂಬಂಧ ಈಗಾಗಲೇ ತನಿಖೆ ಆರಂಭಿಸಿರುವ ಪೊಲೀಸರು ಇಲ್ಲಿಯರೆಗೂ ಒಟ್ಟು 150 ಆರೋಪಿಗಳನ್ನ ಬಂಧಿಸಿದ್ದಾರೆ. ಅಲ್ಲದೇ ಬಂಧಿತರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲು ಸಿದ್ಧತೆಗಳನ್ನು ನಡೆಸಿಕೊಂಡಿದ್ದಾರೆ. ಇನ್ನೂ ಸುತ್ತಮುತ್ತಲ ಪ್ರದೇಶದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿಆರ್ ಪಿಸಿ 144ರ ಅಡಿ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಜಾರಿ ಮಾಡಲಾಗಿದ್ದ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ. ಕರ್ಫ್ಯೂ ಮುಂದುವರಿಕೆಗೆ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು ಆದೇಶ ಹೊರೆಡಿಸಿದ್ದಾರೆ. ಇನ್ನೂ ಆಗಸ್ಟ್ 15 ರ ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಙೆಯನ್ನು ವಿಸ್ತರಿಸಲಾಗಿದೆ. ಪ್ರತಿಭಟನೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವುದು, ಗುಂಪು ಸೇರುವ ರೀತಿಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.
ನಮ್ಮದು ತ್ಯಾಗ ಮಾಡಿರುವ ಕುಟುಂಬ – ಸುಮಲತಾ
ಮಾಜಿ ಸಂಸದೆ ಸುಮಲತಾ ತಮ್ಮ ರಾಜಕೀಯ ಜೀವನದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ಕುಟುಂಬವು ತ್ಯಾಗ ಮಾಡಿರುವುದಾಗಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸುಮಲತಾ, ಸಚಿವ ಚಲುವರಾಯಸ್ವಾಮಿಯ ಸ್ಥಾನಮಾನಕ್ಕಾಗಿ ಪ್ರತಿಭಟನೆಯಲ್ಲಿ...