ರಾಮನಗರ: ಕ್ಷುಲ್ಲಕ ಕಾರಣಕ್ಕೆ ಬೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ತಾಲೂಕು ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ಮಲವೇಗೌಡ ಹಾಗೂ ಮೀಟರ್ ರೀಡರ್ ಎಂ.ಆರ್.ಮಹಾದೇವಯ್ಯ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಲವೇಗೌಡ ಅವರು ಸಿಬ್ಬಂದಿ ಮಹಾದೇವಯ್ಯಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಜತೆಗೆ ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಂಡಿದ್ದಾರೆ.

ಮಾಗಡಿಯ ಅಜ್ಜನಹಳ್ಳಿ-ಗವಿನಾಗಮಂಗಲ ಅರಣ್ಯ ಪ್ರದೇಶದಲ್ಲಿ ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವೈಯಕ್ತಿಕ ವಿಚಾರವಾಗಿ ನಡೆದಿರುವ ಗಲಾಟೆ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








