‘ತೌಕ್ತೆ’ ಚಂಡಮಾರುತದ ಬೆನ್ನಲ್ಲೇ ‘ಯಾಸ್’ ಚಂಡಮಾರುತದ ಭೀತಿ…!
ನವದೆಹಲಿ: ಭಾರತದ ಪಶ್ಚಿಮ ಕರಾವಳಿ ಭಾಗಗಲ್ಲಿ ತೌತೇ ಚಂಡಮಾರುತದಿಂದ ತೀವ್ರ ಹಾನಿ ಉಂಟಾಗಿದೆ. ಕರ್ನಾಟಕದ ಕರಾವಳಿ ಪ್ರದೇಶಗಳು , ಮಲೆನಾಡು ಭಾಗಗಳು ಸೇರಿದಂತೆ ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ತೌತೇ ಚಂಡಮಾರುತದಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ.. ಅನೇಕರು ಜೀವ ಕಳೆದುಕೊಂಡಿದ್ದಾರೆ.
ಅದ್ರಲ್ಲೂ ತೌಕ್ತೇ ಚಂಡಮಾರುತವು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಎರಡೂ ರಾಜ್ಯಗಳಲ್ಲಿ ಒಟ್ಟು 33 ಮಂದಿ ಮೃತಪಟ್ಟಿದ್ದಾರೆ. 90ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಚಂಡಮಾರುತವು ದೇಶದ ಪೂರ್ವ ಹಾಗೂ ದಕ್ಷಿಣ ಕರಾವಳಿ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಹೌದು.. ಮೇ 23ರ ವೇಳೆಗೆ ಹೊಸ ಚಂಡಮಾರುತ ಅಪ್ಪಳಿಸಲಿದ್ದು, ಬಂಗಾಳ ಕೊಲ್ಲಿಯಲ್ಲಿ ಇದು ಸೃಷ್ಟಿಯಾಗಲಿದೆ. ಈ ಚಂಡಮಾರುತಕ್ಕೆ ‘ಯಾಸ್’ ಎಂದು ಹೆಸರಿಡಲಾಗಿದೆ. ಈ ವಿಚಾರವಾಗಿ ಮಾಹಿತಿ ನೀಡಿರುವ ಹವಾಮಾನ ಇಲಾಖೆಯ ಚಂಡಮಾರುತ ವಿಭಾಗದ ಮುಖ್ಯಸ್ಥೆ ಸುನೀತಾ ದೇವಿ, ಮುಂದಿನ ವಾರ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಬಹುದು. ಇದು ತೀವ್ರಗೊಳ್ಳುವ ಸಾಧ್ಯತೆಯೂ ಇದೆ ಎಂದು ನಾವು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.