ಅಯೋಧ್ಯೆಯಲ್ಲಿ ‘ಭಗವಾನ್ ರಾಮ್’ ಹೊಸ ವಿಮಾನ ನಿಲ್ದಾಣ
ಅಯೋಧ್ಯೆ, ಸೆಪ್ಟೆಂಬರ್10: ಅಯೋಧ್ಯೆಯಲ್ಲಿ ಬಹು ನಿರೀಕ್ಷಿತ ರಾಮ ಮಂದಿರದ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದ ಜನರಿಗೆ ಮತ್ತೊಂದು ಭರವಸೆಯನ್ನು ಘೋಷಿಸಿದ್ದು, ಅಯೋಧ್ಯೆಯ ಹೊಸ ವಿಮಾನ ನಿಲ್ದಾಣವನ್ನು ಭಗವಾನ್ ರಾಮ್ ಎಂದು ನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜೊತೆಗೆ ಅಯೋಧ್ಯೆಯ ವಿಮಾನ ನಿಲ್ದಾಣಕ್ಕೂ ಅಂತಾರಾಷ್ಟ್ರೀಯ ಸ್ಥಾನಮಾನ ಸಿಗಲಿದೆ ಎಂದು ಸಿಎಂ ಆದಿತ್ಯನಾಥ್ ಹೇಳಿಸಿದ್ದಾರೆ. ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ವಿಮಾನ ನಿಲ್ದಾಣವನ್ನು ಪೂರ್ಣಗೊಳಿಸಲು ಡಿಸೆಂಬರ್ 2021 ರ ಗಡುವನ್ನು ನಿಗದಿಪಡಿಸಿದೆ.
ಭವ್ಯವಾದ ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಾಗ ಅಯೋಧ್ಯೆಯಲ್ಲಿ ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಪ್ರವಾಸಿ ದಟ್ಟಣೆ ಇರುತ್ತದೆ. ವಿಮಾನ ನಿಲ್ದಾಣ ಪ್ರವಾಸಿಗರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಯ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಅಂತರರಾಷ್ಟ್ರೀಯ ಸ್ಥಾನಮಾನ ನೀಡುವ ಪ್ರಸ್ತಾವನೆಯನ್ನು ಶೀಘ್ರದಲ್ಲೇ ರಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದು ಅವರು ಹೇಳಿದರು.
ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಯೋಗಿ ಸರ್ಕಾರವು 525 ಕೋಟಿ ರೂ.ಗಳ ಮೊತ್ತವನ್ನು ಅನುಮೋದಿಸಿದೆ ಮತ್ತು ಈಗಾಗಲೇ 300 ಕೋಟಿ ರೂ. ಖರ್ಚು ಮಾಡಲಾಗಿದೆ. ಯೋಜನೆಗಾಗಿ ಹೆಚ್ಚಿನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ನಾಗರಿಕ ವಿಮಾನಯಾನ ಸಚಿವ ನಂದ್ ಗೋಪಾಲ್ ನಂದಿ ಹೇಳಿದರು.
ಏತನ್ಮಧ್ಯೆ, ಈ ತಿಂಗಳ ಆರಂಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅವರು ದೇವಾಲಯದ ನಕ್ಷೆಯನ್ನು ಅನುಮೋದಿಸಿದ್ದಾರೆ ಎಂದು ಬಹಿರಂಗಪಡಿಸಿದರು.








