Punjab Election | ಭಗತ್ ಸಿಂಗ್ ಹುಟ್ಟೂರಿನಲ್ಲಿ ಭಗವಂತ್ ಮನ್ ಪದಗ್ರಹಣ
ನವದೆಹಲಿ : ಪಂಜಾಬ್ ವಿಧಾನ ಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಭರ್ಜರಿ ಜಯಭೇರಿ ಬಾರಿಸಿದೆ. ಬರೋಬ್ಬರಿ 92 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡು ಗೆಲುವಿನತ್ತ ಸಾಗಿದೆ.
ಪಂಜಾಬ್ ನಲ್ಲಿ ಇದೇ ಮೊದಲ ಬಾರಿಗೆ ಆಪ್ ಅಧಿಕಾರ ರಚಿಸೋದು ಪಕ್ಕಾ ಆಗಿದ್ದು, ಗೆಲುವಿನ ಬಗ್ಗೆ ಆಪ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಪ್ರತಿಕ್ರಿಯೆ ನೀಡಿದ್ದಾರೆ.
ಸಂಗ್ರೂರ್ ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಭಗವಂತ್ ಮನ್, ನಾನು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವುದಿಲ್ಲ.
ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮ ಖಟ್ಕರ್ಕಲನ್ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.
ಭಗವಂತ್ ಮನ್ ಧುರಿ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ದಲ್ವೀರ್ ಸಿಂಗ್ ವಿರುದ್ಧ 58,206 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
Bhagwant Mann to take oath as Punjab CM in Bhagat Singh’s village









