Bharat jodo yatra | ಭಾರತ್ ಜೋಡೋ ನನ್ನ ಕಾರ್ಯಕ್ರಮ ಅಲ್ಲ ಎಂದಿದ್ದು ಯಾಕೆ ಡಿಕೆಶಿ
ತುಮಕೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಕಾರ್ಯಕ್ರಮ ಕಾಂಗ್ರೆಸ್ ಗೆ ಪ್ರತಿಷ್ಠೆಯಾಗಿದೆ.
ಆದ್ರೆ ರಾಜ್ಯದಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎನ್ನುವ ವಿಚಾರ ಸದ್ದು ಮಾಡುತ್ತಿದೆ.
ಈ ಸಂಬಂಧ ತುಮಕೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಭಾರತ್ ಜೋಡೋ ನನ್ನ ಕಾರ್ಯಕ್ರಮ ಅಲ್ಲ. ಅದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಎಂದು ಹೇಳಿದರು.

ನಾನು ಮತ್ತು ಸಿದ್ದರಾಮಯ್ಯ ಮಂಡ್ಯ ಮೈಸೂರಲ್ಲಿ ೨೭-೧೮ ರಂದು ಸಭೆ ನಡೆಸುತ್ತೇವೆ. ಸೋನಿಯ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಟ್ಟಿದ್ದಾರೆ.
ಸರ್ಕಾರದ ಭ್ರಷ್ಟಾಚಾರ ವಿರುದ್ಧ ಧ್ವನಿ ಎತ್ತಲು ಸೋನಿಯಾ ಗಾಂಧಿ ಸಿದ್ದರಾಮಯ್ಯರಿಗೆ ಜವಾಬ್ದಾರಿ ಕೊಟ್ಟಿದ್ದಾರೆ.
ನನಗೆ ಪಕ್ಷ ಸಂಘಟನೆ ಕೆಲಸ ಕೊಟ್ಟಿದ್ದಾರೆ ಎಂದು ಶಿವಕುಮಾರ್ ಹೇಳಿದರು.