Bharat Jodo Yatra | ಸಂವಿಧಾನದ ಉಳಿವಿಗೆ ಭಾರತ್ ಜೋಡೋ ಯಾತ್ರೆಯ ಅನಿವಾರ್ಯ
ಬೆಂಗಳೂರು : ದೇಶ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗೆ ಭಾರತ್ ಜೋಡೋ ಯಾತ್ರೆಯ ಅನಿವಾರ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಭಾರತ್ ಜೋಡೋ ಯಾತ್ರೆ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ನಮ್ಮ ನಾಯಕರಾದ ರಾಹುಲ್ ಗಾಂಧಿ & ಸೋನಿಯಾ ಗಾಂಧಿ ಅವರು ನನಗೆ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಮುಕ್ತ ಅವಕಾಶ ಕೊಟ್ಟಿದ್ದರು. ನಮ್ಮ ಸರ್ಕಾರ ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ನುಡಿದಂತೆ ನಡೆದಿದೆ. ಬಿಜೆಪಿ ತನ್ನ ಪ್ರಣಾಳಿಕೆಯ 10% ಭರವಸೆಯನ್ನೂ ಈಡೇರಿಸಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿದ್ದ ಪ್ರತಿ ಭರವಸೆಯೂ ಹುಸಿಯಾಗಿದ್ದು, ಬೆಲೆಯೇರಿಕೆ, ನಿರುದ್ಯೋಗ, ಬಡತನ ಇಂಥಾ ಹತ್ತಾರು ಸಮಸ್ಯೆಗಳು ದೇಶದ ಜನರ ಬದುಕು ಕಸಿದಿದೆ. ಈ ಉದ್ದೇಶಕ್ಕಾಗಿಯೇ ರಾಹುಲ್ ಗಾಂಧಿ ಅವರು #ಭಾರತಐಕ್ಯತಾಯಾತ್ರೆ ಮೂಲಕ ಸಂಕಷ್ಟದಲ್ಲಿರುವ ಜನರ ಜೊತೆ ನಿಂತಿದ್ದಾರೆ.
#ಭಾರತಐಕ್ಯತಾಯಾತ್ರೆ ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತಾರೆ ಎಂಬ ಭರವಸೆಯನ್ನು ನಾನು @RahulGandhi ಅವರಿಗೆ ನೀಡುತ್ತಿದ್ದೇನೆ. 12/12#BharatJodoYatra pic.twitter.com/ualrws7lcf
— Siddaramaiah (@siddaramaiah) October 15, 2022
ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು #ಭಾರತಐಕ್ಯತಾಯಾತ್ರೆ ಎಂಬ ಬಹುದೊಡ್ಡ ಸಾಹಸಕ್ಕೆ ಕೈ ಹಾಕಿರುವುದಕ್ಕಾಗಿ ಅವರಿಗೆ ತುಂಬುಹೃದಯದ ಧನ್ಯವಾದ ಅರ್ಪಿಸುತ್ತೇನೆ. ದೇಶ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗೆ ಈ ಯಾತ್ರೆಯ ಅನಿವಾರ್ಯತೆ ಇದೆ.
#ಭಾರತಐಕ್ಯತಾಯಾತ್ರೆ ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತಾರೆ ಎಂಬ ಭರವಸೆಯನ್ನು ನಾನು ರಾಹುಲ್ ಗಾಂಧಿ ಅವರಿಗೆ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.