Bharat Jodo Yatra | ಅ. 6 ಕ್ಕೆ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ
ಮೈಸೂರು : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಕಾಂಗ್ರೆಸ್ ನ ಅಧಿನಾಯಕ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ.
ಸದ್ಯ ಸೋನಿಯಾಗಾಂಧಿಯವರು ವಿಂಡ್ ಫ್ಲವರ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ.
ಹವಾಮಾನ ನೋಡಿಕೊಂಡು ಮಡಿಕೇರಿಗೆ ತೆರಳಲಿದ್ದಾರೆ.
ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಖಾಸಗಿಯಾಗಿ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 6ರಂದು ಭಾರತ್ ಜೋಡೊ ಯಾತ್ರೆಯಲ್ಲಿ ಸೋನಿಯಾಗಾಂಧಿ ಭಾಗಿಯಾಗಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಸಹ ಅಂದು ಸೋನಿಯಾ ಜೊತೆ ಭಾಗಿಯಾಗಲಿದ್ದಾರೆ.
ಅಕ್ಟೋಬರ್ ಆರರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದೆ.
ಈ ಯಾತ್ರೆಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ.
ಅಕ್ಟೋಬರ್ ಏಳರಂದು ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ.