Bharat Jodo Yatra : ನ.19ರ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ
ಇಂದಿರಾ ಗಾಂಧಿ ಜನ್ಮದಿನದಂದು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಮಹಿಳೆಯರು ಮಾತ್ರ ಭಾಗಿಯಾಗಲಿದ್ದಾರೆ.

ಇದೀಗ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿದ್ದು, ವಾಲೇಗಾಂವ್ ಮೂಲಕ ಬಾಗ್ ಫಾಟಾದಲ್ಲಿ 11ನೇ ದಿನದ ಪಾದಯಾತ್ರೆಯು ಕೊನೆಗೊಂಡಿದೆ.
ನವೆಂಬರ್ 19ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನದ ಸಂದರ್ಭದಲ್ಲಿ ಮಹಿಳೆಯರು ಮಾತ್ರ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಂದು ರಾಹುಲ್ ಗಾಂಧಿ ಅವರೊಂದಿಗೆ ಅಕೋಲಾ ಜಿಲ್ಲೆಯ ವಡೆಗಾಂವ್ದಿಂದ ಮಹಿಳೆಯರು ಮಾತ್ರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಮಹಾರಾಷ್ಟ್ರ ಮತ್ತು ದೇಶದ ಇತರ ಭಾಗಗಳಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಸಾರ್ವಜನಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನಾಂದೇಡ್ನಿಂದ ಆರಂಭವಾದ ಪಾದಯಾತ್ರೆ ಹಿಂಗೋಲಿ ಮತ್ತು ವಾಶಿಮ್ ಜಿಲ್ಲೆಗಳಿಗೆ ಆಗಮಿಸಿ ಅಕೋಲಾ ಮತ್ತು ಬುಲ್ಧಾನ ಜಿಲ್ಲೆಗಳಿಗೆ ಬರಲಿದೆ. ನವೆಂಬರ್ 20 ರಂದು ಮಧ್ಯಪ್ರದೇಶಕ್ಕೆ ಪ್ರವೇಶಿಸಲಿದೆ ಎಂದು ಜೈರಾಮ್ ರಮೇಶ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.








