ರಾಹುಲ್ ಗಾಂಧಿ ಭಾರತ್ ಜೊಡೋ ಯಾತ್ರೆ ನಿಲ್ಲಿಸಲಿ – ಕಾಂಗ್ರೆಸ್ ಸಂಸದರ ಸಲಹೆ…
ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಗೋವಾ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸಂಸದ ಫ್ರಾನ್ಸಿಸ್ಕೊ ಸರ್ದಿನ್ಹಾ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ.
ರಾಹುಲ್ ಈಗ ಭಾರತ್ ಜೋಡಿ ಯಾತ್ರೆಯನ್ನು ನಿಲ್ಲಿಸಿ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ಮಾಡಬೇಕೆಂದು ನಾನು ಬಯಸುತ್ತೇನೆ. ಬಿಜೆಪಿಯನ್ನು ಸೋಲಿಸುವ ಪಕ್ಷಕ್ಕೆ ಮತ ಹಾಕುವಂತೆ ರಾಹುಲ್ ಜನರನ್ನ ಎಚ್ಚರಿಸಬೇಕು. ಬಿಜೆಪಿಗೆ ವಿರೋಧ ಪಕ್ಷವಾಗಬಲ್ಲ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷ ಎಂದಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಆಯೋಗದಿಂದ ವಿಧಾನಸಭಾ ಚುನಾವಣೆ ಘೋಷಣೆಯಾಗುವುದರೊಂದಿಗೆ ರಾಜಕೀಯ ಕಾವು ಏರತೊಡಗಿರುವುದು ಗಮನಿಸಬೇಕಾದ ಸಂಗತಿ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ರಚಿಸುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರವನ್ನು ಮರಳಿ ಪಡೆಯಲು ಶತಪ್ರಯತ್ನ ನಡೆಸುತ್ತಿದೆ.
ಹಿಮಾಚಲದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ. ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನ ಇನ್ನೂ ಘೋಷಿಸಲಾಗಿಲ್ಲ. ಇದಕ್ಕೂ ಮುನ್ನ ರಾಜಕೀಯ ಪಕ್ಷಗಳು ಪ್ರಚಾರವನ್ನ ಆರಂಭಿಸಿವೆ.
Bharath jodo yatra: Rahul Gandhi should stop Bharath jodo yatra – Congress MP advises…