BharatJodoYatra | ಕರ್ನಾಟಕದಲ್ಲೇ ಇಂಧನ ತುಂಬಿಸಿ : ರಾಹುಲ್ ಗೆ ಬಿಜೆಪಿ ಸಲಹೆ
ಬೆಂಗಳೂರು : ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ ರಾಹುಲ್ ಗಾಂಧಿ ಅವರಿಗೆ ಮತ್ತೊಮ್ಮೆ ನೆನಪಿಸುತ್ತಿದ್ದೇವೆ. ಮುಂದಿನ ಯಾತ್ರೆಗೆ ಕರ್ನಾಟಕದಲ್ಲೇ ಇಂಧನ ತುಂಬಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜ್ಯ ಬಿಜೆಪಿ ಟಾಂಗ್ ನೀಡಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬಗ್ಗೆ ಟ್ವಿಟ್ಟರ್ ರಾಜ್ಯ ಬಿಜೆಪಿ, ರಾಜ್ಯದ ಪ್ರಬಲ ವೀರಶೈವ ಲಿಂಗಾಯತ ನಾಯಕ, ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲರನ್ನು ಅತ್ಯಂತ ಅಮಾನವೀಯವಾಗಿ ರಾಜೀವ್ ಗಾಂಧಿ ಪದಚ್ಯುತಗೊಳಿಸಿದ್ದರು.
ರಾಹುಲ್ ಗಾಂಧಿ ಅವರೇ, ತಮ್ಮದೇ ಪಕ್ಷದ ವೀರಶೈವ ಲಿಂಗಾಯತ ನಾಯಕನೊಬ್ಬನನ್ನು ರಾಜಕೀಯವಾಗಿ ತುಳಿದ ಘಟನೆಯನ್ನು ಕರ್ನಾಟಕ ಬಿಡುವ ಮುನ್ನ ಒಮ್ಮೆ ನೆನಪಿಸಿಕೊಳ್ಳಿ.

ಇಂದಿರಾ ಗಾಂಧಿ ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಿದಾಗ ಅವರ ಗೆಲುವಿನಲ್ಲಿ ಮತ್ತೊಬ್ಬ ಮಹಿಳೆ ಮೋಟಮ್ಮ ಮಹತ್ತರ ಪಾತ್ರ ವಹಿಸಿದ್ದರು.
ಅದೇ ಮೋಟಮ್ಮ ಅವರನ್ನು ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ನಿಕೃಷ್ಟವಾಗಿ ನಡೆಸಿಕೊಂಡರು. ನೀವು ಮರೆತಿರಬಹುದು, ರಾಜ್ಯದ ಜನತೆ ಮರೆತಿಲ್ಲ.
ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ ರಾಹುಲ್ ಗಾಂಧಿ ಅವರಿಗೆ ಮತ್ತೊಮ್ಮೆ ನೆನಪಿಸುತ್ತಿದ್ದೇವೆ. ಮುಂದಿನ ಯಾತ್ರೆಗೆ ಕರ್ನಾಟಕದಲ್ಲೇ ಇಂಧನ ತುಂಬಿಸಿ.
ಡಿಸೇಲ್ ದರ/ಲೀ.
ಆಂಧ್ರಪ್ರದೇಶ – 99.15
ತೆಲಂಗಾಣ – 97.82
ರಾಜಸ್ಥಾನ – 93.72
ಕರ್ನಾಟಕ – 87.94
ಬಿಜೆಪಿಯೇತರ ರಾಜ್ಯದಲ್ಲಿ ಬೆಲೆ ಏರಿಕೆಯ ಬಿಸಿ ತಾಗಬಹುದು ಎಂದು ಕುಟುಕಿದೆ.
ಇದನ್ನೂ ಓದಿ : https://saakshatv.com/bjp-modi-has-mad…ramnama-162751-2