Bhatkal | ಟೆಂಪೋ – ಐರಾವತ ಬಸ್ ನಡುವೆ ಡಿಕ್ಕಿ – 20 ಮಂದಿಗೆ ಗಾಯ
ಉತ್ತರ ಕನ್ನಡ : ಕೆಎಸ್ ಆರ್ ಟಿಸಿ ವೋಲ್ವೋ ಬಸ್ ಹಾಗೂ ಮಹೀಂದ್ರಾ ಪ್ಯಾಸೆಂಜರ್ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ ಘಟನೆಯಲ್ಲಿ 20ಕ್ಕೂ ಹಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ನಡೆದಿದೆ.
ಮಂಗಳೂರಿನ ಕಡೆ ಹೋಗುತ್ತಿದ್ದ ಐರಾವತ ಬಸ್ ಹೊನ್ನಾವರಹಿಂದ ಭಟ್ಕಳಕ್ಕೆ ಹೋಗುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬಸ್ ನ ಮುಂಬದಿ ಕುಳಿತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಮುರುಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.