ಭಾರತ ಹಾಗೂ ಕೇಂದ್ರದ ಕನಸಾಗಿದ್ದ ರಾಮಮಂದಿರ ನಿರ್ಮಾಣಕ್ಕೆ ಆ.5 ರಂದು ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇನ್ನೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಿಜೆಪಿಯ ಹಿರಿಯ ನಾಯಕರಾದ ಎಲ್. ಕೆ ಅಡ್ವಾಣಿ, ಎಂಎಂ ಜೋಶಿ, ಆರ್ ಎಸ್ ಎಸ್ ನ ಮುಖ್ಯಸ್ಥರಾದ ಮೋಹನ್ ಭಾಗವತ್ ಸೇರಿದಂತೆ ಹಲವಾರು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿಂದ ಅಧಿಕೃತ ಮಾಹಿತಿ ಹೊರಬಂದಿದೆ.
ಅಲ್ಲದೇ ಈ ಕಾರ್ಯಕ್ರಮಕ್ಕೆ ಎಲ್ಲಾ ಧರ್ಮಗಳ ಧರ್ಮಗುರುಗಳನ್ನೂ ಸಹ ಆಹ್ವಾನಿಸುವ ಚಿಂತನೆ ನಡೆಸಲಾಗಿದೆ ಎಂದು ಟ್ರಸ್ಟ್ ನ ಸದಸ್ಯರಾದ ಅನಿಲ್ ಮಿಶ್ರಾ ಅವರು ತಿಳಿಸಿದ್ದಾರೆ. ಈಗ ಸದ್ಯಕ್ಕೆ ದೇಶವನ್ನು ಕೊಎಒನಾ ಹೆಮ್ಮಾರಿ ಕಾಡುತ್ತಿರುವ ಪರಿಣಾಮ ಕಾರ್ಯಕ್ರಮದಲ್ಲಿ 200 ಜನರು ಭಾಗಿಯಾಗುವುದಕ್ಕೆ ಮಾತ್ರ ಅವಕಾಶವಿದೆ. ಆದರೆ ಸಾವ್ಜನಿಕರಿಗಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ನೇರಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಟ್ರಸ್ಟ್ ನ ಸದಸ್ಯರು ತಿಳಿಸಿದ್ದಾರೆ.








