ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೊರೊನಾ ಹಾವಳಿ ಹೆಚ್ಚಾದ ಪರಿಣಾಮ ಜುಲೈ 24ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜುಲೈ 24ರ ರಾತ್ರಿಯಿಂದಲೇ ಲಾಕ್ ಡೌನ್ ಅನ್ವಯಿಸಲಿದ್ದು, 10 ದಿನಗಳ ವರೆಗೂ ಜಾರಿಯಲ್ಲಿರುವಂತೆ ಮಧ್ಯಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಕಳೆದ 24 ಗಂಟೆಗಳಲ್ಲಿ 157 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,669ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆ 144ರ ಗಡಿದಾಟಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಲಾಕ್ ಡೌನ್ ಅಸ್ತ್ರ ಪ್ರಯೋಗಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ದಿನಸಿ, ಮೆಡಿಕಲ್ ಹೊರತಾಗಿ ಇನ್ನೆಲ್ಲಾ ಸೇವೆಗಳು ಸಂಪೂರ್ಣವಾಗಿ ಬಂದ್ ಆಗಿರಲಿದ್ದು, ನಾಗರಿಕರು ಈ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಹಬ್ಬದ ಸೀಸನ್ಗೆ ‘ರಿಯಲ್ಮಿ’ ಬಂಪರ್ ಆಫರ್: ಸ್ಮಾರ್ಟ್ಫೋನ್ ಖರೀದಿಸಿದರೆ ಕಾರು, ಸ್ಕೂಟರ್ ಗೆಲ್ಲುವ ಅವಕಾಶ
ಬೆಂಗಳೂರು: ದೀಪಾವಳಿ ಮತ್ತು ಹಬ್ಬದ ಸೀಸನ್ ಶುರುವಾಗಿದ್ದು ಸ್ಮಾರ್ಟ್ಫೋನ್ ಪ್ರಿಯರಿಗೆ ಭಾರತದ ಜನಪ್ರಿಯ ಬ್ರ್ಯಾಂಡ್ ರಿಯಲ್ಮಿ ಭರ್ಜರಿ ಆಫರ್ಗಳನ್ನು ಘೋಷಿಸಿದೆ. ನೀವು ಹೊಸದಾಗಿ ರಿಯಲ್ಮಿ 16 ಸರಣಿಯ...







