ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ Bhupendra Patel saaksha tv
ಅಹಮಾದಾಬಾದ್ : ಗುಜರಾಜ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಗುಜರಾತ್ ರಾಜಭವನದಲ್ಲಿ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಪ್ರಮಾಣ ವಚಸ ಬೋಧಿಸಿದ್ದಾರೆ. ಭೂಪೇಂದ್ರ ಪಟೇಲ್ ಅವರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನರೇಂದ್ರ ಸಿಂಗ್ ತೋಮರ್, ಮನ್ಸೂಕ್ ಮಾಂಡವ್ಯ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್,
ಹರಿಯಾಣ ಸಿಎಂ ಮನೋಹರಲಾಲ್ ಕಟ್ಟರ್ ಸೇರಿ ಗುಜರಾತ್ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು.
ಬಿಜೆಪಿ ಹೈಕಮಾಂಡ್ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಸ್ಥಾನದಲ್ಲಿ ಕೂರಿಸಿದೆ.
ಯಾಕೆಂದರೇ ಗುಜರಾತ್ ನಲ್ಲಿ ಪಟೇಲ್ ಸಮುದಾಯದವರು ಬಹುಸಂಖ್ಯಾತರಾಗಿದ್ದು, ಅವರು ಪಕ್ಷದತ್ತ ಸೆಳೆಯಲು ಪ್ಲಾನ್ ಮಾಡಿಕೊಂಡಿದೆ.