Bhuvneshwar kumar – ಭುವನೇಶ್ವರ್ ಕುಮಾರ್ ಹೊಸ ದಾಖಲೆ.. ಮೊದಲ ಬೌಲರ್
ಅಂತಾರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಹಿರಿಯ ವೇಗಿ ಭುನವೇಶ್ವರ್ ಕುಮಾರ್ ಅಪರೂಪದ ದಾಖಲೆ ಬರೆದಿದ್ದಾರೆ.
ಟಿ 20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಗಳನ್ನು ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ಸೃಷ್ಟಿಸಿದ್ದಾರೆ.
ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಷಾಹಿನ್ ಆಫ್ರಿದಿ ಅವರನ್ನು ಔಟ್ ಮಾಡುವ ಮೂಲಕ ಭುವಿ.. ಟಿ 20 ಕ್ರಿಕೆಟ್ ನಲ್ಲಿ 86 ನೇ ವಿಕೆಟ್ ಪಡೆದರು.

ಇಲ್ಲಿಯವರೆಗೂ ಟಿ 20 ಕ್ರಿಕೆಟ್ ನಲ್ಲಿ ಭುವನೇಶ್ವರ್ ಕುಮಾರ್ 86 ವಿಕೆಟ್ ಗಳನ್ನು ಗಳಿಸಿದ್ದಾರೆ.
ಇದಕ್ಕೂ ಮೊದಲು ಈ ದಾಖಲೆ ಟೀಂ ಇಂಡಿಯಾದ ಸ್ಪಿನ್ನರ್ ಯುಜುವೇಂದ್ರ ಚಹಾಲ್ ( 85 ವಿಕೆಟ್ ) ಹೆಸರಿನಲ್ಲಿತ್ತು. ಇದೀಗ ಆ ದಾಖಲೆಯನ್ನು ಭುವಿ ಬ್ರೇಕ್ ಮಾಡಿದ್ದಾರೆ.
ಇನ್ನು ಪಾಕ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳೊಂದಿಗೆ ಭಾರತ ತಂಡ ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮಹತ್ವದ ಪಾತ್ರ ವಹಿಸಿದ್ದರು.








