Bhuvneshwar Kumar | ಭುವಿ ಖಾತೆ ಮತ್ತೊಂದು ದಾಖಲೆ
ಟೀಂ ಇಂಡಿಯಾ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ ಖಾತೆಯಲ್ಲಿ ಮತ್ತೊಂದು ಅಪರೂಪದ ದಾಖಲೆ ಸೇರಿಕೊಂಡಿದೆ.
ಭಾನುವಾರ ಐರ್ಲೆಂಡ್ ವಿರುದ್ಧದ ಮೊದಲ T20I ನಲ್ಲಿ, ಆಂಡ್ರ್ಯೂ ಬಲ್ಬಿರ್ನಿ ವಿಕೆಟ್ ಪಡೆಯುವ ಮೂಲಕ ಶಾರ್ಟ್ ಫಾರ್ಮ್ಯಾಟ್ ಪವರ್ ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ (34 ವಿಕೆಟ್) ಪಡೆದ ಬೌಲರ್ ಎನಿಸಿಕೊಂಡರು.
ಇದಕ್ಕೂ ಮುನ್ನ ಈ ದಾಖಲೆ ವಿಂಡೀಸ್ ಸ್ಪಿನ್ನರ್ ಸ್ಯಾಮ್ಯುಯೆಲ್ ಬದ್ರಿ ಮತ್ತು ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಹೆಸರಿನಲ್ಲಿತ್ತು. ಇವರಿಬ್ಬರು ಪವರ್ ಪ್ಲೇನಲ್ಲಿ 33 ವಿಕೆಟ್ ಪಡೆದಿದ್ದಾರೆ.

ಡಬ್ಲಿನ್ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಅದ್ಭುತ ಬೌಲಿಂಗ್ ಮಾಡಿದ್ದರು.
ಇದರಿಂದಾಗಿ ಹಾರ್ದಿಕ್ ಸೇನೆ 7 ವಿಕೆಟ್ ಗಳ ಜಯ ಸಾಧಿಸಿದೆ. ಇಂದು ಎರಡನೇ ಪಂದ್ಯ ನಡೆಯಲಿದೆ.
ಈ ಪಂದ್ಯದಲ್ಲಿ ಗೆದ್ದು ಸರಣಿ ಕ್ಲೀನ್ ಸ್ವೀಪ್ ಸಾಧಿಸುವತ್ತ ಚಿತ್ತ ನೆಟ್ಟಿದೆ.
ಟೀಂ ಇಂಡಿಯಾ ಪ್ಲೇಯಿಂಗ್ 11
ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಯಜುವೇಂದ್ರ ಚಾಹಲ್








