ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಪೋಷಕರ ಆಕ್ರೋಶ
ಬೆಂಗಳೂರು: ಶಾಲೆಯಲ್ಲಿ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಿಪಡಿಸಿರುವ ಘಟನೆ ಬೆಂಗಳೂರಿನ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ ನಡೆದಿದೆ.
ರಿಚರ್ಡ್ ಟೌನ್ ನಲ್ಲಿರುವ ಕ್ಲಾರೆನ್ಸ್ ಫ್ರೌಢಶಾಲೆಯಲ್ಲಿ ದಿನನಿತ್ಯ ಬೈಬಲ್ ಓದುವುದು ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಆಡಳಿತ ಮಂಡಳಿಯು ಮಕ್ಕಳ ಹಕ್ಕುಗಳ ಸಂರಕ್ಷಣೆ ಅಧಿನಿಯಮ 2005 ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಶಾಲೆಯ ಆಡಳಿತ ಮಂಡಳಿ ಮಕ್ಕಳು ಉತ್ತಮ ನಾಗರಿಕನಾಗಲು ಬೈಬಲ್ ಮುಖ್ಯ. ಬೈಬಲ್ ಕಲಿಕೆ ವಿರೋಧಿಸುವವರಿಗೆ ಶಾಲೆಯಲ್ಲಿ ಅಡ್ಮಿಷನ್ ಸಿಗುವುದಿಲ್ಲ. ದಿನನಿತ್ಯ ಬೈಬಲ್ ಓದುವುದು ಶಾಲೆಯಲ್ಲಿ ಕಡ್ಡಾಯ ಎಂದು ಆಡಳಿತ ಮಂಡಳಿ ತಿಳಿಸಿದೆ.
ಶಾಲೆಯ ಆಡಳಿತ ಮಂಡಳಿಯ ಕುರಿತು ರಿಪ್ಲಬ್ಲಿಕ್ ವರ್ಲ್ಡ್ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ, ಶಾಲೆಯ ಈ ನಡೆಯು ಸಂವಿಧಾನದ 25 ಮತ್ತು 30ನೇ ವಿಧಿಗಳ ಉಲ್ಲಂಘನೆಯಾಗುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಯ ಧಾರ್ಮಿಕ ನಂಬಿಕೆಗಳನ್ನು ಹೇರುವಂತಿಲ್ಲ ಎಂದು ತಿಳಿಸಿದ್ದಾರೆ.