Bidar | ಲಾರಿ – ಕಂಟೇನರ್ ನಡುವೆ ಅಪಘಾತ : ಇಬ್ಬರು ಸಾವು
ಬೀದರ್ : ಲಾರಿ ಮತ್ತು ಕಂಟೇನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಚಾಲಕರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಅಂಬೆಸಂಗವಿ ಕ್ರಾಸ್ ಬಳಿ ನಡೆದಿದೆ.
40 ವರ್ಷದ ಲಾರಿ ಚಾಲಕ ವಿಜಯ ಕುಮಾರ್ ಹಾಗೂ 32 ವರ್ಷದ ರಾಮ್ ಕಿಶನ್ ಮೃತ ದುರ್ದೈವಿಗಳು.
ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಭಾಲ್ಕಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.