ದಿನೇ ದಿನೇ ಗಡಿ ಜಿಲ್ಲೆ ಬೀದರ್ ನಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಹೆಚ್ಚಾಗುತ್ತಲೇ ಇದೆ.
ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು 70 ಹೊಸ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಒಟ್ಟು ಸಂಖ್ಯೆ 6289ಕ್ಕೆ ಏರಿಕೆಯಾಗಿದೆ.
ಇದುವೆಗೆ ಜಿಲ್ಲೆಯಲ್ಲಿ ಒಟ್ಟು 151 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಂಗಳವಾರ 53 ಸೋಂಕಿತರೂ ಸೇರಿದಂತೆ ಈವರೆಗೆ 5654 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಇನ್ನೂ 480 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರುವುದು ಜನರ ಆತಂಕಕ್ಕೆ ಕಾರಣವಾಗಿದೆ.