ಗಡಿ ಜಿಲ್ಲೆ ಬೀದರ್ ನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಹೊಸದಾಗಿ 43 ಜನ ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4256ಗೆ ಏರಿಕೆಯಾಗಿದೆ. ಇಂದು ಒಂದೇ ದಿನ 105 ಜನ ಗುಣಮುಖರಾಗಿದ್ದು, ಇದುವರೆಗೆ ಆಸ್ಪತ್ರೆಯಿಂದ ಬಿಡುಗಡೆ ಆದವರ ಸಮಖ್ಯೆ 3487ಕ್ಕೆ ತಲುಪಿದೆ.
ಇನ್ನೂ 635 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 66,011 ಜನರ ಗಂಟಲು ಮಾದರಿಯ ತಪಾಸಣೆ ಮಾಡಲಾಗಿದೆ. ಈ ಪೈಕಿ 61,323 ಜನರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಉಳಿದ 432 ಜನರ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ.