ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರು ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಸೆಪ್ಟೆಂಬರ್ ದೇಶಕ್ಕೆ ಆಗಮಿಸುತ್ತಿದ್ದಾರೆ.
ಭಾರತದಲ್ಲಿ ಸೆ. 07 ರಿಂದ 10 ರಂದು ಜಿ-20 ಶೃಂಗಸಭೆ ನಡೆಯಲಿದ್ದು, ಜಿ-20 ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಾಗತಿಕ ಮಟ್ಟದ ನಾಯಕರೊಂದಿಗೆ ಬೈಡನ್, ಉಕ್ರೇನ್ ಸೇರಿದಂತೆ ಜಾಗತಿಕ ಸವಾಲುಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ಪ್ರಧಾನಿ ಮೋದಿ ಅವರ ಜಿ-20 ನಾಯಕತ್ವದ ಬಗ್ಗೆಯೂ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ. ನವದೆಹಲಿಯಲ್ಲಿ ಸೆ.09 ರಿಂದ 10 ವರೆಗೆ ಜಿ-20 ಜಾಗತಿಕ ನಾಯಕರ ಶೃಂಗಸಭೆ ನಡೆಯಲಿದೆ.
2022 ರ ಡಿ.1 ರಿಂದ ಭಾರತ ಜಿ-20 ಅಧ್ಯಕ್ಷತೆ ವಹಿಸಿಕೊಂಡಿತ್ತು. ಜಿ-20 ನಾಯಕರ ಶೃಂಗಸಭೆಯಲ್ಲಿ ಶುದ್ಧ ಶಕ್ತಿ ಪರಿವರ್ತನೆ, ಹವಾಮಾನ ಬದಲಾವಣೆ ಎದುರಿಸುವುದು ಉಕ್ರೇನ್ ಸಂಘರ್ಷದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವುದಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಶ್ವೇತ ಭವನ ಹೇಳಿದೆ.