ಮುಂಬೈ : ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಿನ್ನೆ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಪತಿ ಅಭಿಷೇಕ್ ಬಚ್ಚನ್ ತಮಗೆ ಕೊರೊನಾ ಸೋಂಕಿರುವ ಬಗ್ಗೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದರು. ಸದ್ಯ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಇಬ್ಬರಿಗೂ ಶನಿವಾರ ರಾತ್ರಿ ಕೊರೊನಾ ಸೋಂಕು ತಗುಲಿರುವುದು ದೃಢಪಡುತ್ತಲೇ, ಜಯಾ ಬಚ್ಚನ್ ಸೇರಿದಂತೆ ಐಶ್ವರ್ಯ ಹಾಗೂ ಆರಾಧ್ಯ ರ್ಯಾಪಿಡ್ ಆಂಟಿಜೆನ್ ಕಿಟ್ನಿಂದ ಕೋವಿಡ್ 19 ಪರೀಕ್ಷೆ ಮಾಡಿಸಿಕೊಂಡಿದ್ದರು.
ಇದೀಗ ಇದರ ವರದಿ ಬಂದಿದ್ದು, ಬಿಗ್ ಬಿ ಸೊಸೆ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ. ಇನ್ನು ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್ ಬಂದಿದೆ.