ಬೆಂಗಳೂರು: ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೃದಯಾಘಾತವಾಗುತ್ತಿದ್ದಂತೆ ಶಾಸಕರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ. 17ರಂದು ಸಂಜೆ ವೇಳೆ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ಸಂದರ್ಭದಲ್ಲಿ ಲಘು ಹೃದಯಾಘಾತವಾಗಿದೆ. ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.