ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸದ್ಯದಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ. ಕೈಗಾರಿಕಾ ಕ್ಷೇತ್ರದಿಂದ ಹಿಡಿದು ಎಲ್ಲ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸಲು ಸೂಚನೆ ನೀಡುತ್ತೇವೆ ಎಂದು ಬಿಜೆಪಿಗೆ ಶಾಕ್ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಎಲ್ಲ ಜಾತಿ, ಧರ್ಮಗಳಿಗೆ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಕೊರೊನಾ ಸಂದರ್ಭದ ಹಗರಣ, 40 ಪರ್ಸೆಂಟ್ ಕಮಿಷನ್ ಆರೋಪ, ನೀರಾವರಿ ಇಲಾಖೆ ಸೇರಿದಂತೆ ಎಲ್ಲವನ್ನೂ ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.