ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಸಂಭವಿಸಿದ ದುರಂತದ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸ್ ಇಲಾಖೆ ಹಲವು ಮಂದಿಯನ್ನು ವಿಚಾರಣೆಗಾಗಿ ಕರೆದೊಯ್ದಿತ್ತು, ಈ ಪೈಕಿ ಚಲನಚಿತ್ರ ನಟ ಅಲ್ಲು ಅರ್ಜುನ್ ಅವರ ಮೇಲೂ ದೋಷಾರೋಪಣೆ ನಡೆದಿತ್ತು.
ಸಂಧ್ಯಾ ಥಿಯೇಟರ್ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಅಲ್ಲು ಅರ್ಜುನ್ ಅವರು ಪ್ರಮುಖ ಕಾರಣವೆಂದು ಪೊಲೀಸರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ, ಅವರನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನಾಂಪಲ್ಲಿ ಕೋರ್ಟ್ ಗೆ ಹಾಜರುಪಡಿಸಿದರು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತು.
ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ನೀಡಿರುವ ತೆಲಂಗಾಣ ಹೈಕೋರ್ಟ್, ನ್ಯಾಯಾಂಗ ಬಂಧನವನ್ನು ತಾತ್ಕಾಲಿಕವಾಗಿ ತಡೆಯಲು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕೋರ್ಟ್, ತನಿಖೆ ಮುಂದುವರಿಸಲು ಪೊಲೀಸರಿಗೆ ಸಹಕರಿಸುವಂತೆ ಅಲ್ಲು ಅರ್ಜುನ್ ಗೆ ಸೂಚನೆ ನೀಡಿದೆ.
ಈ ತೀರ್ಪು ಅಲ್ಲು ಅರ್ಜುನ್ ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಚಿತ್ರರಂಗಕ್ಕೂ ದೊಡ್ಡ ಸಾಂತ್ವನ ನೀಡಿದೆ. ನಟನ ಬಿಡುಗಡೆ ಅಭಿಮಾನಿಗಳಲ್ಲಿ ಹರ್ಷವನ್ನು ಹುಟ್ಟಿಸಿದೆ.