ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕಿದ್ದು, ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ, 5 ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕೆಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದೆ.
ಇಂದು ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿತು. ಆದರೆ, ವಿಶೇಷ ತನಿಖಾ ತಂಡ (SIT) ರೇವಣ್ಣ ಪ್ರಭಾವಿ ವ್ಯಕ್ತಿ. ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ ಯಾವುದೇ ಕಾರಮಕ್ಕೆ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದರು.
ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಜಾಮೀನು ತಿರಸ್ಕರಿಸಬಹುದು. ಆದರೆ ನನ್ನ ಕಕ್ಷಿದಾರ ರೇವಣ್ಣ ಪ್ರಕರಣದಲ್ಲಿ ಇಲ್ಲಿ ಯಾವುದೇ ಸತ್ಯ ಮತ್ತು ಸಾಂದರ್ಭಿಕ ಸಾಕ್ಷಿಗಳಿಲ್ಲ ಎಂದು ರೇವಣ್ಣ ಪರ ವಕೀಲ ನಾಗೇಶ್ ವಾದಿಸಿದರು. ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.