ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)ಗೆ ಹೈಕೋರ್ಟ್ (High Court) ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿ ಆದೇಶ ಹೊರಡಿದೆ.
ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಈಗ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಹೀಗಿಗ ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆ ಮುಂದೂಡಿದೆ.
ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ
ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...







