ಟೀಂ ಇಂಡಿಯಾಗೆ ಬಿಗ್ ರಿಲೀಫ್ : ಕೊರೊನಾ ವರದಿ ನೆಗೆಟಿವ್ Corona saaksha tv
ಮ್ಯಾಂಚೆಸ್ಟರ್ : ಟೀಂ ಇಂಡಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಎಲ್ಲಾ ಆಟಗಾರರ ಕೊರೊನಾ ವರದಿ ನೆಗೆಟಿವ್ ಬಂದಿದೆ.
ಹೀಗಾಗಿ ಇಂದಿನಿಂದ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಯಾವುದೇ ಅಡ್ಡಿ ಇಲ್ಲದಂತಾಗಿದೆ.
4ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.
ನಿನ್ನೆ ಮತ್ತೋರ್ವ ಸಹಾಯಕ ಸಿಬ್ಬಂದಿಗೆ ಕೊರೊನಾ ದೃಢವಾದ ಬೆನ್ನಲ್ಲೇ ಭಾರತದ ಅಭ್ಯಾಸವನ್ನು ಮೊಟಕುಗೊಳಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಐದನೇ ಟೆಸ್ಟ್ ಪಂದ್ಯಕ್ಕೆ ಕೊರೊನಾ ಕರಿನೆರಳು ಆವರಿಸಿತ್ತು.
ಆದ್ರೆ ಇದೀಗ ಎಲ್ಲಾ ಆಟಗಾರರ ವರದಿ ರಿಪೋರ್ಟ್ ನೆಗೆಟಿವ್ ಬಂದಿದೆ. ಹಾಗಾಗಿ ಯಾವುದೇ ಆತಂಕವಿಲ್ಲದೆ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ
ಅಂದಹಾಗೆ ಐದು ಮ್ಯಾಚ್ ಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಪಡೆದುಕೊಂಡಿದೆ.