ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯದಲ್ಲಿ ಮತ್ತೆ ಬಿಗ್ ಶಾಕ್ ಎದುರಾಗಿದೆ.
ಇಂದಿನಿಂದ ಮತ್ತೆ ಮದ್ಯದ ದರ ಏರಿಕೆಯಾಗಿದ್ದು, ಮದ್ಯ ಪ್ರಿಯರು ಆಕ್ರೋಶ ವ್ಯಕ್ತಪಡಿಸುವಂತಾಗಿದೆ. ಅಬಕಾರಿ (Excise Department) ಸುಂಕವನ್ನು ಶೇ. 185 ರಿಂದ ಶೇ. 195 ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಬಿಯರ್ ಬಾಟಲಿಗೆ 5 ರಿಂದ 12 ರೂ. ವರೆಗೆ ಬೆಲೆ ಏರಿಕೆ ಕಂಡಿದೆ.
ಈ ಮೂಲಕ 6 ತಿಂಗಳ ಅಂತರದಲ್ಲಿ ಬಿಯರ್ ಬೆಲೆ ಸುಮಾರು 40 ರೂ.ಗಳಷ್ಟು ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ (Congress) ನೇನೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಯರ್ ಮೇಲೆ ಶೇ.20 ರಷ್ಟು ಹೆಚ್ಚುವರಿ ಅಬಕಾರಿ ಸುಂಕ ವಿಧಿಸಿತ್ತು. ಹೀಗಾಗಿ ಬಿಯರ್ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಪ್ರತಿ ಬಾಟಲ್ ಮೇಲೆ ಕನಿಷ್ಠ 10 ರೂ.ವರೆಗೆ ದರ ಏರಿಕೆ ಮಾಡಿದ್ದವು. ಈಗ ಮತ್ತೊಮ್ಮೆ ಅಬಕಾರಿ ಸುಂಕ ಹೆಚ್ಚಿಸಿದ ಹಿನ್ನೆಲೆಯಲ್ಲಿ ಬಿಯರ್ ದರ ಹೆಚ್ಚಳವಾಗಿದೆ.