ಬೆಂಗಳೂರು: ಧಾರವಾಹಿ ವೀಕ್ಷರಿಗೆ ಬಿಗ್ ಶಾಕ್. ಕೊರೊನಾ ವೈರಸ್ ಹರಡದಂತೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಕೊರೊನಾ ಎಂಬ ಮಹಾಮಾರಿ ಎಲ್ಲರಲ್ಲೂ ಆತಂಕ ಹೆಚ್ಚು ಮಾಡಿದೆ. ಈ ಹಿನ್ನೆಲೆಯಲ್ಲಿ ರಿಯಾಲಿಟಿ ಶೋಗಳು ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಮಾರ್ಚ್ 22ರಿಂದ 31ರವರೆಗೆ ಸ್ಥಗಿತಗೊಳಿಸಲು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನಿರ್ಧರಿಸಿದೆ. ಈ ವಿಚಾರವಾಗಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಹಾಗೂ ಸಂಘ ಸಂಸ್ಥೆಗಳು ಇಂದು ಸಭೆ ಸೇರಿದ್ದವು. ಸಭೆಯಲ್ಲಿ ಚರ್ಚೆ ನಡೆಸಿ ರಿಯಾಲಿಟಿ ಶೋಗಳು ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಲು ತೀರ್ಮಾನ ಮಾಡಲಾಗಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ. ಮಾರ್ಚ್ 31ರ ನಂತರ ಅಂದಿನ ಸ್ಥಿತಿಗತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಧಾರವಾಹಿಗಳು ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ನಿಲ್ಲಿಸಲು ಅಸೋಸಿಯೇಷನ್ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ..ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್.ನರಸಿಂಹಮೂರ್ತಿ ಜೀವನಗಾಥೆ..!
ಡಾ. ಎನ್.ನರಸಿಂಹಮೂರ್ತಿ ಸಂಸ್ಥಾಪಕರು ಮತ್ತು ಅಧ್ಯಕ್ಷರು ಟೆಲಿಕಾಂ ಎಂಪ್ಲಾಯೀಸ್ & ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ನಟ ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ...








