ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

Big shock for Sriramulu amidst political conflict

Shwetha by Shwetha
January 20, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬಳ್ಳಾರಿ: ಇರಲಾರದೆ ಇರುವೆ ಬಿಟ್ಕೊಳೋದು ಅಂದ್ರೆ ಇದೆನಾ ಎಂಬಂತಾಗಿದೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಪರಿಸ್ಥಿತಿ. ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ, ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರಿಗೆ ದೊಡ್ಡ ಕಾನೂನು ಸಂಕಷ್ಟವೊಂದು ಎದುರಾಗಿದೆ. ರಾಜಕೀಯ ಎದುರಾಳಿಗಳನ್ನು ಟೀಕಿಸುವ ಭರದಲ್ಲಿ ಮಾಡಿದ ಒಂದು ಎಡವಟ್ಟು, ಅವರನ್ನು ಈಗ ಪೋಕ್ಸೊ (POCSO) ಕಾಯ್ದೆಯಡಿ ಆರೋಪಿಯನ್ನಾಗಿ ಮಾಡಿದೆ. ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಭಾಷಣದ ಜೋಶ್ ನಲ್ಲಿ ಎಡವಿದ ಶ್ರೀರಾಮುಲು

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಇತ್ತೀಚೆಗೆ ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇದಿಕೆಯಲ್ಲಿ ಅಬ್ಬರದ ಭಾಷಣ ಮಾಡುತ್ತಿದ್ದ ಶ್ರೀರಾಮುಲು, ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಡ್ರಗ್ಸ್ ಮಾಫಿಯಾ ಮಿತಿಮೀರಿದೆ ಎಂದು ಆರೋಪಿಸುವಾಗ, ಅವರ ಮಾತು ನಿಯಂತ್ರಣ ತಪ್ಪಿತು.

ನಗರದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿಯ ಪ್ರಕರಣವನ್ನು ಪ್ರಸ್ತಾಪಿಸುವಾಗ, ಶ್ರೀರಾಮುಲು ಅವರು ಆ ಸಂತ್ರಸ್ತ ಬಾಲಕಿಯ ಹೆಸರು, ಆಕೆಯ ಜಾತಿ ಮತ್ತು ಆಕೆ ವ್ಯಾಸಂಗ ಮಾಡುತ್ತಿರುವ ಶಾಲೆಯ ಹೆಸರನ್ನು ಬಹಿರಂಗವಾಗಿ ಮೈಕ್‌ನಲ್ಲಿ ಕೂಗಿ ಹೇಳಿದರು. ನೂರಾರು ಜನರಿದ್ದ ಸಭೆಯಲ್ಲಿ ಮತ್ತು ಮಾಧ್ಯಮಗಳ ಎದುರೇ ಸಂತ್ರಸ್ತೆಯ ಗುರುತನ್ನು ಜಗಜ್ಜಾಹೀರು ಮಾಡಿದ್ದು ಈಗ ಕಾನೂನಿನ ಕುಣಿಕೆಯಾಗಿ ಪರಿಣಮಿಸಿದೆ.

ಕಾನೂನು ಏನು ಹೇಳುತ್ತದೆ?

ಭಾರತೀಯ ಕಾನೂನಿನ ಅನ್ವಯ, ಲೈಂಗಿಕ ದೌರ್ಜನ್ಯ ಅಥವಾ ಯಾವುದೇ ರೀತಿಯ ಶೋಷಣೆಗೆ ಒಳಗಾದ ಅಪ್ರಾಪ್ತ ಬಾಲಕಿಯ ಗುರುತನ್ನು (ಹೆಸರು, ವಿಳಾಸ, ಶಾಲೆ, ಪೋಷಕರ ವಿವರ ಇತ್ಯಾದಿ) ಯಾವುದೇ ಕಾರಣಕ್ಕೂ ಬಹಿರಂಗಪಡಿಸುವಂತಿಲ್ಲ. ಇದು ಸಂತ್ರಸ್ತೆಯ ಗೌಪ್ಯತೆ ಮತ್ತು ಘನತೆಗೆ ಧಕ್ಕೆ ತರುವ ವಿಚಾರವಾಗಿದ್ದು, ಇದನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ. ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಇದಕ್ಕೆ ಕಠಿಣ ಶಿಕ್ಷೆಯ ನಿಬಂಧನೆಗಳಿವೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರಾಗಿ ಶ್ರೀರಾಮುಲು ಅವರು ಈ ಸೂಕ್ಷ್ಮತೆಯನ್ನು ಮರೆತಿದ್ದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ.

ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಶ್ರೀರಾಮುಲು ಅವರ ಭಾಷಣದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ತಕ್ಷಣವೇ ಕಾರ್ಯಪ್ರವೃತರಾಗಿದ್ದಾರೆ. ಎಪಿಎಂಸಿ ಠಾಣೆಯ ಸಿಪಿಐ ಮೊಹಮ್ಮದ್ ರಫಿಕ್ ಅವರು ನೀಡಿದ ದೂರಿನ ಮೇರೆಗೆ, ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಾಜಿ ಸಚಿವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (POCSO Act 2012) ಕಲಂ 23(1) ಮತ್ತು 23(2) ಹಾಗೂ ಬಾಲಾಪರಾಧಿ ನ್ಯಾಯ ಕಾಯ್ದೆ (JJ Act) ಸೆಕ್ಷನ್ 74 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಹಳೆ ಗಾಯದ ಮೇಲೆ ಬರೆ ಎಳೆದಂತಾದ ಹೊಸ ಕೇಸ್

ಬಳ್ಳಾರಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜಕೀಯ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ. ಜನವರಿ 1 ರಂದು ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷ ಹಿಂಸಾಚಾರಕ್ಕೆ ತಿರುಗಿತ್ತು. ಈ ಗಲಾಟೆಯಲ್ಲಿ ನಡೆದ ಗುಂಡಿನ ದಾಳಿಗೆ ರಾಜಶೇಖರ್ ಎಂಬ ಯುವಕ ಬಲಿಯಾಗಿದ್ದ.

ಈಗಾಗಲೇ ಆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಕೊಲೆ ಯತ್ನ, ಪ್ರಚೋದನೆ ಸೇರಿದಂತೆ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಹೀಗೆ ಈಗಾಗಲೇ ಒಂದು ಕಾಲಿನ ಮೇಲೆ ನಿಂತು ಕಾನೂನು ಹೋರಾಟ ನಡೆಸಬೇಕಿರುವ ಶ್ರೀರಾಮುಲು ಅವರಿಗೆ, ಈಗ ಪೋಕ್ಸೊ ಪ್ರಕರಣ ದಾಖಲಾಗಿರುವುದು ಮತ್ತೊಂದು ದೊಡ್ಡ ಹೊಡೆತವಾಗಿದೆ.

ಒಟ್ಟಿನಲ್ಲಿ, ಎದುರಾಳಿಗಳನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋದ ಮಾಜಿ ಸಚಿವರು, ತಾವೇ ತೋಡಿದ ಹೊಂಡದಲ್ಲಿ ಬಿದ್ದಂತಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram