ಸಾಹುಕಾರ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ

1 min read
Ramesh jarakiholi

ಸಾಹುಕಾರ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ (Dinesh Kallahalli)

ಬೆಂಗಳೂರು : ಬೆಳಗಾವಿ ಸಾಹುಕಾರ್ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನ ಹಿಂಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಲ್ಲಹಳ್ಳಿ ಮಾರ್ಚ್ 2 ರಂದು ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಜಾರಕಿಹೋಳಿ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ಅವರು ಶುಕ್ರವಾರ ಪೊಲೀಸರಿಗೆ ಹೇಳಿಕೆ ನೀಡಿದ್ದರು.

Dinesh Kallahalli

ಈ ವಿಡಿಯೋ ಸೋಷಿಯಲ್ ಮೀಡಿಯಾ ಮತ್ತು ಇತರ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ರಮೇಶ್ ಜಾರಕಿಹೋಳಿ ರಾಜೀನಾಮೆ ನೀಡಬೇಕಾಯಿತು.

ಇದು ರಾಜ್ಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನ ವಾಪಸ್ ಪಡೆದುಕೊಂಡಿದ್ದಾರೆ. ಇದು ಸದ್ಯ ಭಾರಿ ಕುತೂಹಲ, ಅನುಮಾನಕ್ಕೆ ಕಾರಣವಾಗಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd