ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಉಗ್ರ ಸ್ವರೂಪಿಯಾಗಿ ತಾಂಡವವಾಡುತ್ತಿದ್ದು, ಇಂದು ಕರ್ನಾಟಕಕ್ಕೆ ಕೊರೊನಾ ಸುನಾಮಿ ಅಪ್ಪಳಿಸಿದೆ. ಹೆಮ್ಮಾರಿ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಉಡುಪಿಯಲ್ಲಿ ಬರೋಬ್ಬರಿ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ.
ಆರೋಗ್ಯ ಇಲಾಖೆ ವರದಿ ಪ್ರಕಾರ ಇಂದು ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ 13, ಬೆಳಗಾವಿ 36, ಬೀದರ್ 39, ಹಾಸನ 03, ವಿಜಯಪುರ 53, ಚಿಕ್ಕಬಳ್ಳಾಪುರ 3, ದಕ್ಷಿಣ ಕನ್ನಡ 8, ಉತ್ತರ ಕನ್ನಡ 7, ಧಾರವಾಡ 3, ಬೆಂಗಳೂರು ಗ್ರಾಮಾಂತರ 12, ಹಾವೇರಿ 2, ರಾಮನಗರ 2, ಕೋಲಾರ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ಇಂದು ಕೊರೊನಾದಿಂದ 83 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಗುಣಮುಖರಾಗಿರುವವರ ಸಂಖ್ಯೆ 1,688ಕ್ಕೇರಿದೆ. ರಾಜ್ಯದಲ್ಲಿ ಸದ್ಯ 3,088 ಪ್ರಕರಣಗಳು ಸಕ್ರಿಯಾಗಿವೆ. ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣ ಪೈಕಿ 482 ಪ್ರಕರಣಗಳು ಅಂತರರಾಜ್ಯ ಹಾಗೂ 1 ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯನ್ನು ಹೊಂದಿದೆ. ರಾಜ್ಯದ ವಿವಿಧ ಆಸ್ಪತ್ರೆಯ ತುರ್ತು ನಿಗಾ ಘಟಕಗಳಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ








