Bihar
ಬಿಹಾರ : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕಾಗಿ ನಡೆಯುತ್ತಿರುವ ಮತ ಎಣಿಕೆಯತ್ತ ಸದ್ಯ ಇಡೀ ದೇಶದ ಚಿತ್ತ ನೆಟ್ಟಿದೆ. ಯಾರು ಈ ಬಾರಿ ಬಿಹಾರದ ಗದ್ದುಗೇರಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಇನ್ನೂ ಗೆಲವೇ ಗಂಟೆಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆಯ ಅಂತಿಮ ಫಲಿತಾಂಶ ಹೊರಬೀಳಲಿದೆ. ಈ ಮೂಲಕ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್ ಮತ್ತು ಆರ್ಜೆಡಿ ಯುವ ನಾಯಕ ತೇಜಸ್ವಿ ಯಾದವ್ ಭವಿಷ್ಯವೂ ನಿರ್ಧಾರವಾಗಲಿದೆ.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಮೇಲುಗೈ ಸಾಧಿಸಿದ್ದು, ಸತತ 15 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸಿಎಂ ನಿತೀಶ್ ಕುಮಾರ್ ಅವರ ಜನಪ್ರಿಯತೆ ಕಡಿಮೆಯಾದಂತೆ ಕಾಣುತ್ತಿದೆ. ಬೆಳಗ್ಗೆ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯ ಮತಎಣಿಕೆ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿಯೇ ಭಾರತೀಯ ಜನತಾ ಪಕ್ಷ ಮೇಲುಗೈ ಸಾಧಿಸಿದ್ದು, ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಜೆಡಿಯು 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
2015ರಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 53 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಆದರೆ ಈ ಬಾರಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿದೆ. ಆದರೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ 2015ರಲ್ಲಿ 71 ಕ್ಷೇತ್ರಗಳಲ್ಲಿ ಸ್ಥಾನಪಡೆದು ಎನ್ ಡಿಎ ಮೈತ್ರಿಯೊಂದಿಗೆ ಮುಖ್ಯಮಂತ್ರಿ ಹುದ್ದೆ ಏರಿದ್ದರು. 2015ರ ಚುನಾವಣೆಗಿಂತ ಕಡಿಮೆ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ರಾರಾ ಕ್ಷೇತ್ರದಲ್ಲಿ ಕಮಲಕ್ಕೆ ಮುನ್ನಡೆ : ಶಿರಾದಲ್ಲಿ ಭಾರಿ ಪೈಪೋಟಿ
ಇತ್ತ ಜೆಡಿಯು ವಕ್ತಾರ ಕೆಸಿ ತ್ಯಾಗಿ ಅವರು ಈ ಸಂಬಂಧ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. ಜೆಡಿಯುವನ್ನು ಆರ್ ಜೆಡಿ ಅಥವಾ ತೇಜಸ್ವಿ ಯಾದವ್ ಸೋಲಿಸಲು ಸಾಧ್ಯವಿಲ್ಲ. ನಮಗೆ ಸೋಲುಂಟಾದರೆ ಅದು ಕೊರೊನಾದಿಂದ ಮಾತ್ರ ಎಂದಿದ್ದಾರೆ. ಹೌದು ದೇಶಕ್ಕೆ ಮಹಾಮಾರಿಯಾಗಿರುವ ಕೊರನಾವೈರಸ್ ಜೊತೆ ನಿತೀಶ್ ಅವರು ಹೋರಾಟದಲ್ಲಿ ತೊಡಗಿದ್ದರಿಂದ ಚುನಾವಣೆ ತಂತ್ರಗಾರಿಕೆಯಲ್ಲಿ ಸೋತರು. ನಾವು ಕೋವಿಡ್ ವಿರುದ್ಧ ಹೋರಾಟದಲ್ಲಿ ಸೋತಿದ್ದೇವೆ. ಕೋವಿಡ್19ನಿಂದ ನಮಗೆ ಇಂಥ ಪರಿಸ್ಥಿತಿ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಜನತೆ ನೀಡುವ ತೀರ್ಪನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದಿದ್ದಾರೆ.
‘ದೀದಿಗೆ ಬೆಂಬಲಿಸಿದ್ರೆ ಕೈಕಾಲು ಕಳೆದುಕೊಳ್ತೀರಾ ಹುಷಾರ್’ : ಬಿಜೆಪಿ ನಾಯಕ
Bihar
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel