ಬಿಹಾರ್ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಜನತಾ ದಳ (ಯುನೈಟೆಡ್) ಪಕ್ಷ ಬಿಜೆಪಿಯೊಂದಿಗಿನ ತನ್ನ ಮೈತ್ರಿಯನ್ನ ಮುರಿದುಕೊಂಡಿದೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆಗೆ ಮಾಡಲು ನಿತೀಶ್ ಮುಂದಾಗಿದ್ದಾರೆ.
ಸರ್ಕಾರ ರಚಿಸಲು ನಿತೀಶ್ ಕುಮಾರ್ ಅವರಿಗೆ ಆರ್‌ಜೆಡಿ ಮತ್ತು ಕಾಂಗ್ರೆಸ್ ಬೆಂಬಲ ಪತ್ರ ಸಲ್ಲಿಸಿವೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಜೆಡಿಯು ಶಾಸಕರ ಪಕ್ಷದ ಸಭೆಯಲ್ಲಿ ಬಿಜೆಪಿಯಿಂದ ದೂರವಾಗುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕಾಂಗ್ರೆಸ್ ಮತ್ತು ಎಡಪಕ್ಷಗಳು ಈಗಾಗಲೇ ಮಹಾಮೈತ್ರಿ ಕೂಟ ಸರ್ಕಾರ ರಚಿಸಲು ಹಿರಿಯ ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರಿಗೆ ಬೆಂಬಲ ಪತ್ರವನ್ನು ಸಲ್ಲಿಸಿವೆ.
243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ ಆರ್‌ಜೆಡಿಯ ಶಾಸಕರ ಸಂಖ್ಯೆ 79 ಮತ್ತು ಬಿಜೆಪಿಯ 77, ಜೆಡಿಯು 45, ಕಾಂಗ್ರೆಸ್ 19, ಎಡಪಕ್ಷಗಳು 16 ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ 4 ಸದಸ್ಯರನ್ನು ಹೊಂದಿದೆ.








