ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ..!
ಬಿಹಾರ : ಬಿಹಾರದ ಮಾಜಿ ಸಿಎಂ ಹಾಗೂ ಆರ್ ಜೆಡಿ ಪಕ್ಷದ ಅಧ್ಯಕ್ಷ ಲಾಲೂ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಹೇಳಲಾಗ್ತಿದೆ. ಆರೋಗ್ಯ ಮತ್ತಷ್ಟು ಗಂಭೀರಗೊಂಡಿದೆ. ಹೀಗಾಗಿ ರಾಂಚಿಯ ರಿಮ್ಸ್ ಆಸ್ಪತ್ರೆಗೆ ಅವರ ಕುಟುಂಬಸ್ಥರು ದೌಡಾಯಿಸಿದ್ದಾರೆ. ಅನಾರೋಗ್ಯದಿಂದಾಗಿ ನಿನ್ನೆ ರಾಂಚಿಯ ರಿಮ್ಸ್ ಆಸ್ಪತ್ರೆಗೆ ಲಾಲು ಪ್ರಸಾದ್ ಯಾದವ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಲೇ ಇದೆ ಎಂದು ಹೇಳಲಾಗ್ತಿದೆ. ಇದೇ ಕಾರಣದಿಂದಾಗಿ ಮಗಳು ಮಿಸಾ ಭಾರತೀ, ಕಿರಿಯ ಮಗ ತೇಜಸ್ವಿ ಯಾದವ್ ಮತ್ತು ಪತ್ನಿ ರಾಬ್ರಿ ದೇವಿ ದೌಡಾಯಿಸಿದ್ದಾರೆ. ರಿಮ್ಸ್ ನರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್, ಲಾಲು ಪ್ರಸಾದ್ ಆರೋಗ್ಯ ಸ್ಥಿರವಾಗಿದೆ. ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಪರೀಕ್ಷೆಯ ವರದಿ ನಾಳೆ ಬರಲಿದೆ ಎಂದು ತಿಳಿಸಿದ್ದಾರೆ.
ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ : ‘ಕೈ’ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ ಐ ಆರ್..!
ಗೋಹತ್ಯೆ ನಿಷೇಧ ಕಾಯ್ದೆ ಬಳಿಕ ರಾಜ್ಯದಲ್ಲಿ ಮೊದಲ ಕೇಸ್ ದಾಖಲು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel