ಬಿಹಾರದಲ್ಲಿನ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ ಪರಿಣಾಮ 24 ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಬಿಹಾರದ ಸೀತಾಮರ್ಹಿಯಲ್ಲಿನ ಮಾರುಕಟ್ಟೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 24ಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಈ ಘಟನೆ ಬಿಹಾರದ ಬದಿ ಬಜಾರ್‌ನಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಅಂಗಡಿಗಳು ಮಾತ್ರ ಸುಟ್ಟು ಭಸ್ಮವಾಗಿವೆ. ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.