ಕಾರವಾರ | ಬೈಕ್ ಗಳ ನಡುವೆ ಡಿಕ್ಕಿ, ನಾಲ್ವರು ಗಂಭೀರ

1 min read
road accident

ಕಾರವಾರ | ಬೈಕ್ ಗಳ ನಡುವೆ ಡಿಕ್ಕಿ, ನಾಲ್ವರು ಗಂಭೀರ

ಕಾರವಾರ : ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಮಟಾದ ಕತಗಾಲ ಬಳಿ ನಡೆದಿದೆ.

ಘಟನೆಯಲ್ಲಿ ಶಶಾಂಕ್ ಅಂಬಿಗ, ದಿನೇಶ ಪಟಗಾರ ಎಂಬುವವರು ಗಂಭೀತವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅವರನ್ನ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕತ್ಸೆ ಮುಂದುವರಿದಿದೆ.

Bike

ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಶಿರಸಿಯಿಂದ ಬರುತ್ತಿದ್ದ ಬೈಕ್ ಹಾಗೂ ಎದುರಿಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಪರಿಣಾಮ ಬೈಕ್ ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನ ಗಮನಿಸಿದ ಸ್ಥಳೀಯರು ಗಾಯಾಳುಗಳನ್ನು ಹಾರೈಕೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd