Tumakur | ಸಾವಿನಲ್ಲಿ ಒಂದಾದ ಸ್ನೇಹಿತರು
ತುಮಕೂರು : ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ ಅಂತ್ಯಕ್ರಿಯೆಗೆ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.
29 ವರ್ಷದ ಹೇಮಂತ್ ಕುಮಾರ್ ಮೃತ ದುರ್ದೈವಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿ ಜಬಿ ಉಲ್ಲಾ ಎಂಬುವವರು ಸಾವನಪ್ಪಿದ್ದರು.

ಈ ವಿಷಯ ತಿಳಿದು ಆಘಾತಕ್ಕೆ ಒಳಗಾಗಿದ್ದ ಹೇಮಂತ್ ಕುಮಾರ್ ಜಬಿಉಲ್ಲಾನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿ ಹೋಗುವ ಸಂದರ್ಭದಲ್ಲಿ ಕೊತ್ತಗೆರೆ ಗ್ರಾಮದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಇನ್ನು ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.