ಶಿವಮೊಗ್ಗ : ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ನೆಲಕ್ಕೆ ಬಿದ್ದವರ ಮೇಲೆ ಲಾರಿ ಹರಿದ ಘಟನೆ ನಡೆದಿದೆ.
ಈ ಭೀಕರ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ. ಎರಡು ಬೈಕ್ ಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿತ್ತು. ಈ ವೇಳೆ ಸವಾರರು ನೆಲಕ್ಕೆ ಬಿದ್ದಿದ್ದಾರೆ. ಆಗ ಹೊರಟಿದ್ದ ಲಾರಿ ಇವರ ಮೇಲೆಯೇ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರನ್ನು ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದವರು ಜಂಬರಗಟ್ಟ ನಿವಾಸಿಗಳು ಎಂದು ಗುರುತಿಸಲಾಗಿದೆ.
ಈ ಕುರಿತು ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.