ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ ಈ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಆಕ್ರೋಶಗೊಂಡು ಖಾಸಗಿ ಬಸ್ ಗೆ ಕಲ್ಲು ತೂರಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರಿನಿಂದ ಮೂಡಬಿದ್ರೆಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ಸಂದರ್ಭದಲ್ಲಿ ತೋಡಾರ್ ಮೈಟ್ ಕಾಲೇಜ್ ಬಳಿ ಕಾಲೇಜಿನ ಬಸ್ಸನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸದ್ಯ ಗಾಯಗೊಂಡಿರುವ ತಾಯಿ ಹಾಗೂ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.