ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಾರಿಗೆ ಬೈಕ್ ಹೊಡೆದ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಾಲಿಗ್ರಾಮ ಹತ್ತಿರ ನಡೆದಿದೆ. ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಭವಾನಿ ರೇವಣ್ಣ ಅವರು ಗರಂ ಆಗಿದ್ದಾರೆ. ಈ ವೇಳೆ ಬೈಕ್ ಸವಾರನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ವೀಡಿಯೋ ವೈರಲ್ ಆಗಿದೆ.
ದೂರದಿಂದ ಟೈರ್ ಉಜ್ಜಿಕೊಂಡು ಕಂಟ್ರೋಲ್ ಮಾಡಿದ್ದೀವಿ. ಸೈಡ್ ಹೋಗಬೇಕು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.